ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಮಹಿಳೆಯರು ಸ್ವಯಂ ಉದ್ದಿಮೆಯನ್ನು ಸ್ಥಾಪಿಸಲು ಹಾಗೂ ವ್ಯಾಪಾರ ಚಟುವಟಿಕೆಗಳನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗಾಗಿ ಉದ್ಯೋಗಿನಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಮಹಿಳೆಯರು ಯಾವೇಲ್ಲಾ ಸೌಲಭ್ಯಗಳನ್ನು ಪಡೆಯಬಹುದು? ಎಷ್ಟು ಸಾಲ ಸೌಲಭ್ಯ ದೊರೆಯಲಿದೆ ಎಂಬ ಮಾಹಿತಿ ಇಲ್ಲಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನೆ ಯೋಜನೆ ಸೇರಿದಂತೆ ಮುಂತಾದ ಯೋಜನೆಗಳಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರ ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ವತಿಯಿಂದ ಸಹಾಯಧನ ನೀಡುತ್ತದೆ.
ವಯೋಮಿತಿ ವಿವರ:
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಫಲಾನುಭವಿಗಳಿಗೆ:
ಆದಾಯ ಮಿತಿ: 2 ಲಕ್ಷ ರೂ. ಗಳು
ಘಟಕ ವೆಚ್ಚ: ಕನಿಷ್ಠ ರೂ. 1 ಲಕ್ಷದಿಂದ ಗರಿಷ್ಠ ರೂ. 3 ಲಕ್ಷಗಳವರೆಗೆ
ಸಹಾಯಧನ: ಶೇಕಡಾ 50 ರಷ್ಟು ನೀಡುತ್ತಾರೆ.
ಸಾಮಾನ್ಯ ವರ್ಗದ ಮಹಿಳೆಯರಿಗೆ:
ಆದಾಯ ಮಿತಿ: ರೂ.1.50 ಲಕ್ಷಗಳು
ಘಟಕ ವೆಚ್ಚ: ಗರಿಷ್ಠ ರೂ. 3 ಲಕ್ಷ ರೂ.
ಸಹಾಯಧನ : ಶೇ.30 ರಷ್ಟು ನೀಡುತ್ತಾರೆ.
ಸೂಚನೆಗಳು:
ಅರ್ಜಿ ಸಲ್ಲಿಸುವವರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.
ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿಸಲ್ಲಿಸುವುದು.
ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಮಾನ್ಯ ಸಚಿವರು /ಮಾನ್ಯ ಶಾಸಕರು ಕರ್ನಾಟಕ ಸರ್ಕಾರ /ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ (ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್) ಕೇಂದ್ರಗಳಲ್ಲಿ ಅರ್ಜಿಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2025
ಹೆಚ್ಚಿನ ಮಾಹಿತಿಗಾಗಿ:
ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಥವಾ ನಿಗಮದ ವೆಬ್ ಸೈಟ್ (https://kswdc.karnataka.gov.in) ಸಂಪರ್ಕಿಸಬಹುದು.